ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ; ಸ್ಥಳದಲ್ಲೇ ಯುವತಿಯ ದುರ್ಮರಣ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಯುವತಿ ಸಾವು

ಕೊಡಗು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ನಡೆದಿದೆ. ಕುಶಾಲನಗರ ಹೆರೂರು ಗ್ರಾಮದ ಭವ್ಯ(25) ಮೃತ ಯುವತಿ. ಭವ್ಯ, ನವೀನ್ ಎಂಬಾತನ ಜೊತೆ ಫಾಲ್ಸ್ ವೀಕ್ಷಣೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್​ ನಿಯಂತ್ರಣ ತಪ್ಪಿದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಭವ್ಯ ಸ್ಥಳದಲ್ಲೇ ಮೃತಪಟ್ಟಿದ್ದು, ನವೀನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *