ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ

ಕೊಡಗು ಜಿಲ್ಲೆಯಲ್ಲಿ ಕಳೆದ ವಾರದಿಂದ ಕೊಂಚ ಬಿಡುವು ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ.ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು,ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.ಕಳೆದೆರಡು ತಿಂಗಳಿನಲ್ಲಿ ನಾಲ್ಕಾನೆ ಬಾರಿಗೆ ಈ ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು ಜಿಲ್ಲೆಯ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದೆ.
ವರದಿ – ಹೋಮೇಶ್,ಮಣಗಲಿ.

Leave a Reply

Your email address will not be published. Required fields are marked *