ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ : ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ಸಂತೆಮರೂರು ಹಾಗೂ ಬೇಲೂರು ತಾಲ್ಲೂಕು ಯಮಸಂಧಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ.7000 ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಪಂಚಾಯಿತಿ ಸ್ಥಳೀಯ ನಿವಾಸಿಗಳಾಗಿರತಕ್ಕದ್ದು ಹಾಗೂ ಕನಿಷ್ಠ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು ಮತ್ತು ಆಯಾ ಪಂಚಾಯಿತಿಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಹಾಗೂ ಇತರೆ ದಾಖಾಲಾತಿಗಳನ್ನು ಪಂಚಾಯಿತಿಗೆ ಸಲ್ಲಿಸಲು ಕೊನೆಯ ದಿನಾಂಕ:10-08-2018. ಅರ್ಜಿ ನಮೂನೆಯನ್ನು ಆಯಾ ಪಂಚಾಯಿತಿ ಕಾರ್ಯಾಲಯಗಳಲ್ಲಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಉಪನಿರ್ದೇಶಕರವರ ಕಚೇರಿ (ದೂ.ಸಂ.08172-268608), ಜಿಲ್ಲಾ ಕೇಂದ್ರ ಗ್ರಂಥಾಲಯ, ಹಾಸನ ಇವರನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *