ಮೈಸೂರು-ಕೊಡಗು ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಯದುವೀರ್ ಸ್ಪರ್ಧೆ …?

2019ರ ಲೋಕಸಭಾ ಚುನಾವಣೆಯಲ್ಲಿ ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪರ್ಧೆ ಮಾಡ್ತಾರಾ? ಇಂತಹ ಪ್ರಶ್ನೆಯೊಂದು ಬಿಜೆಪಿ ವಲಯದಲ್ಲಿ ಈಗ ಚರ್ಚೆಗೆ ಗ್ರಾಸವಾಗಿದೆ.
ಕೇಂದ್ರ ಸರ್ಕಾರದ ಸಂಪರ್ಕ ಅಭಿಯಾನದ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೆಚ್ಚುಗೆಯ ಮಾತುಗಳನ್ನು ಆಡಿದ್ದು, ಮುಂದಿನ ಎರಡು ಅವಧಿಯಲ್ಲಿ ಮೋದಿ ಅವರೇ ಭಾರತದ ಪ್ರಧಾನಿಯಾದ್ರೆ, ದೇಶದ ಆರ್ಥಿಕತೆ ಸುಧಾರಿಸುತ್ತೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ರು. ಇದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಇಂಪ್ರೆಸ್ ಆಗಿದ್ದು 2019ರ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ ಮಾಡಿಕೊಳ್ಳುತ್ತಿದೆ.

ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ರವರು ಬಿಜೆಪಿಯ ಸಂಪರ್ಕ ಅಭಿಯಾನದ ವೇಳೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಡಿದ ಮೆಚ್ಚುಗೆಯ ಮಾತುಗಳೇ ಅವರಿಗೆ ವರದಾನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ, ಯದುವೀರ್​ರ ಮಾತಿನಿಂದ ಪ್ರೇರಿತರಾಗಿದ್ದು, ಹಾಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರ ಬದಲಿಗೆ ಮಹಾರಾಜರಿಗೆ ಟಿಕೆಟ್ ಕೊಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ

2014ರಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರತಾಪ್ ಸಿಂಹ, ಸಂಸದರಾಗಿ ಸಂಸತ್ ಪ್ರವೇಶಿಸಿದ್ರು. ಕಳೆದ ನಾಲ್ಕುವರೆ ವರ್ಷಗಳಲ್ಲಿ ಗುರುತಿಸುವಂತಹ ಕೆಲಸಗಳನ್ನು ಮಾಡಿಲ್ಲ ಎಂಬ ಅಪವಾದವಿದ್ರೂ, ಯಾವುದೇ ಹಗರಣಗಳಲ್ಲಿ ಸಿಲುಕದೇ ಪ್ರತಾಪ್ ಸಿಂಹ, ಆರಕ್ಕೇರದೇ ಮೂರಕ್ಕೀಳಿಯದೇ ಕೆಲಸ ನಿರ್ವಹಿಸುತ್ತಿದ್ದಾರೆ.
ಇನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವಂತೆ, ಅವರ ಮನವೊಲಿಸಲು ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗುತ್ತಿದೆ. ಒಂದು ವೇಳೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿಯಿಂದ ಮೈಸೂರು-ಕೊಡಗು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಲಿಯಲು ಸಮ್ಮತಿಸಿದ್ರೆ, ಪ್ರತಾಪ್ ಸಿಂಹರಿಗೆ ಬೇರೆ ಕ್ಷೇತ್ರವನ್ಮನು ಆಯ್ಕೆ ಮಾಡಿಕೊಳ್ಳುವಂತೆ ಹೈಕಮಾಂಡ್ ಸೂಚಿಸಲಿದೆ ಎನ್ನಲಾಗುತ್ತಿದೆ.

ಕೃಪೆ – first news kannada

Leave a Reply

Your email address will not be published. Required fields are marked *