ಭಾರೀ ಮಳೆ : ಶಿರಾಡಿ ಘಾಟ್ ಮತ್ತೆ ಬಂದ್ – ಪರದಾಡುತ್ತಿರುವ ಪ್ರಯಾಣಿಕರು.

ಸಕಲೇಶಪುರ, ಆಗಷ್ಟ್ 14 : ಕರಾವಳಿ ಹಾಗೂ ಮಲೆನಾಡು, ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರದ ಸಮೀಪದ ಮಾರನಹಳ್ಳಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಇದರಿಂದ ಗುಡ್ಡದ ಮಣ್ಣು ರಸ್ತೆಯ ಮೇಲೆ ಬಿದ್ದಿದ್ದು ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಆಗಿದೆ.

ಇದೀಗ ಸಾಲುಗಟ್ಟಿ ನಿಂತ ವಾಹನಗಳು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಅತ್ತ ಮುಂದೆ ಸಾಗಲೂ ಆಗದೆ ಹಿಂದೆ ಹೋಗಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಹೆದ್ದಾರಿಯಲ್ಲಿ ಕುಸಿದ ಮಣ್ಣನ್ನು ಭರದಿಂದ ತೆರವುಗೊಳಿಸಲಾಗುತ್ತಿದೆ.

ವರದಿ – ಹೋಮೇಶ್,ಮಣಗಲಿ.

Leave a Reply

Your email address will not be published. Required fields are marked *