ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮ ದಿನ ಆಚರಣೆ

ಹಾಸನ :- ಸೆ 5 ರಂದು ಬೆಳಗ್ಗೆ 10 ಗಂಟೆಗೆ ಶ್ರೀ ಸರ್ವಪಲ್ಲಿ ರಾಧಾಕೃಷ್ಣ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಾಸನಾಂಭ ಕಲಾಕ್ಷೇತ್ರ ಸಾಲಗಾಮೆ ರಸ್ತೆ. ಹಾಸನ ಇಲ್ಲಿ ಹಮ್ಮಿಕೊಂಡಿದ್ದಾರೆ.

ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನ ಮಂತ್ರಿಗಳು, ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ. ದೇವಗೌಡ ಅವರು ಗೌರವಾನ್ವಿತ ಉಪಸ್ಥಿತ ವಹಿಸುವರು, ಲೋಕೋಪಯೋಗಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ. ರೇವಣ್ಣನವರು ಉದ್ಘಾಟನೆ ನೆರವೆರಿಸುವರು.

ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ.ಗೌಡ ಅವರು ಅಧ್ಯಕ್ಷತೆ ವಹಿಸುವರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಿ.ಎಸ್. ಶ್ವೇತ ದೇವರಾಜ್ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸುವರು.

ಶಾಸಕರುಗಳಾದ ಹೆಚ್.ಕೆ. ಕುಮಾರ ಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಸಿ..ಎನ್. ಬಾಲಕೃಷ್ಣ, ಎ.ಟಿ. ರಾಮಸ್ವಾಮಿ, ಕೆ.ಎಸ್. ಲಿಂಗೇಶ್ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ , ಕೆ.ಟಿ. ಶ್ರೀ ಕಂಠೆಗೌಡ, ಎಂ.ಎ. ಗೋಪಾಲಸ್ವಾಮಿ, ತಾಲ್ಲೂಕು ಪಂಚಾಯಿತ್ ಅಧ್ಯಕ್ಷರಾದ ಬಿ.ಟಿ. ಸತೀಶ್, ಜಿಲ್ಲಾ ಪಂಚಾಯಿತ್ ಉಪಾಧ್ಯಕ್ಷರಾದ ಸುಪ್ರದೀಪ್ ಯಜಮಾನ್, ಜಿಲ್ಲಾಧಿಕಾರಿಗಳಾದ ರೋಹಿಣಿ ಸಿಂಧೂರಿ, ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಮತ್ತಿತರು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.

Leave a Reply

Your email address will not be published. Required fields are marked *