ಇಂದಿನಿಂದ ಮತ್ತೆ ಶಿರಾಡಿಘಾಟ್ ರಸ್ತೆ ಓಪನ್

ಹಾಸನ:- ಇಂದಿನಿಂದ  ಶಿರಾಡಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ಭಾರಿ ಮಳೆಯ ಕಾರಾಣ ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾಗಿ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕಳೆದ 20 ದಿನಗಳ ಹಿಂದೆ ಬಂದ್ ಮಾಡಲಾಗಿತ್ತು. ಜಿಲ್ಲಾ ಪ್ರಗತಿ ಪರಿಶಿಲಾನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ವಿಷಯ ತಿಳಿಸಿದ್ದಾರೆ. ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದರ ನಿರ್ವಹಣೆ ಹಾಗೂ ಪ್ರಯಾಣಿಕರ ಸುರಕ್ಷತೆಯ ಉಸ್ತುವಾರಿಯನ್ನು ಅವರೇ ವಹಿಸಿಕೊಳ್ಳುತ್ತಾರೆ. ಮತ್ತು ಅನಾಹುತಗಳಿಗೆ ಅವರೆ ಜವಾಬ್ದಾರಿಗಳು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *