ಗೌರಿ-ಗಣೇಶ ಹಬ್ಬಕ್ಕೆ ಕೆಎಸ್ಆರ್​ಟಿಸಿ 1200 ಹೆಚ್ಚುವರಿ ಬಸ್​ ಸೇವೆ…

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಸೆ. 11 ಹಾಗೂ 12 ರಂದು ಬೆಂಗಳೂರಿನಿಂದ 1200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು ನಗರದ ಶ್ರೀ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

Leave a Reply

Your email address will not be published. Required fields are marked *