ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟ

ಮಡಿಕೇರಿ:-ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2018ರ ಸಂಬಂಧ ಪ್ರಕೃತಿ ವಿಕೋಪದಿಂದಾಗಿ ಮಧ್ಯಂತರದಲ್ಲಿ ಸ್ಥಗಿತಗೊಳಿಸಲಾಗಿದ್ದ ಜಿಲ್ಲೆಯ ಸೋಮವಾರಪೇಟೆ, ವಿರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಯ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ.
ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. ಅಕ್ಟೋಬರ್, 16 ರಂದು ಜಿಲ್ಲಾಧಿಕಾರಿ ಅವರು ಪರಿಷ್ಕøತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಅಂದೇ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್, 17 ರಂದು ನಾಮಪತ್ರ ಪರಿಶೀಲಿಸುವ ಕಾರ್ಯ ನಡೆಯಲಿದೆ. ಅಕ್ಟೋಬರ್, 20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೇ ದಿನವಾಗಿದೆ. ಅಕ್ಟೋಬರ್, 28 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನ ನಡೆಯಲಿದೆ. ಅಕ್ಟೋಬರ್, 30 ರಂದು ಮರು ಮತದಾನ ಇದ್ದಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಅಕ್ಟೋಬರ್, 31 ರಂದು ಮತ ಎಣಿಕೆಯು ಬೆಳಗ್ಗೆ 8 ಗಂಟೆಯಿಂದ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಎಸ್.ಉಮೇಶ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *