ನಾಳೆಯಿಂದ ರಾಜ್ಯಾದ್ಯಂತ ಮಳೆ ನಿರೀಕ್ಷೆ

ಬಂಗಾಳಕೊಲ್ಲಿಯಲ್ಲಿ ಹಿಂಗಾರು ಚುರುಕಾಗಲು ಪೂರಕ ವಾತಾವರಣ ಸೃಷ್ಟಿಯಾಗಲಿದ್ದು, ಮಂಗಳವಾರದಿಂದ (ಡಿ. 4) ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ತುಂತುರು ಅಥವಾ ಸಾಧಾರಣ ಮಳೆ, ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರದಲ್ಲಿ ತುಂತುರು ಮಳೆಯಾಗಲಿದೆ.

Leave a Reply

Your email address will not be published. Required fields are marked *