ಮೋದಿ ಸರ್ಕಾರದ ಭರ್ಜರಿ ಗಿಫ್ಟ್ : ರೈತರ 4 ಲಕ್ಷ ಕೋಟಿ ಸಾಲಮನ್ನಾ

🌹 ಕಾವೇರಿ ನ್ಯೂಸ್ 🌹: ನವದೆಹಲಿ :  ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಣೆಯ ಬೆನ್ನಲ್ಲೇ ಬಿಜೆಪಿ ಎಚ್ಚೆತ್ತಂತೆ ತೋರುತ್ತಿದ್ದು, ಈ ಎಲ್ಲ ರಾಜ್ಯಗಳಲ್ಲಿ ಪಕ್ಷದ ಸೋಲಿಗೆ ರೈತರ ಸಮಸ್ಯೆಗಳು ಕಾರಣ ಎಂಬುದನ್ನು ಮನಗಂಡಂತಿದೆ. ಅದಕ್ಕೆಂದೇ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿಕೊಂಡಿರುವ 4 ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡಲು ಚಿಂತನೆಯನ್ನು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದಾರೆ ಎಂಬ ಮಹತ್ವದ ಮಾಹಿತಿ ಲಭಿಸಿದೆ.
 ಈ ವಿಷಯ ಈಗ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಬಹುಚರ್ಚಿತ ವಿಷಯವಾಗಿದೆ. ರೈತರ ಸಮಸ್ಯೆಗಳು ಹಾಗೂ ಸಾಲ ಮನ್ನಾ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಯೋಚಿಸದೇ ಹೋದರೆ 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಕಷ್ಟವಾಗಬಹುದು ಎಂದು ಬಹುತೇಕರು ಅಭಿಪ್ರಾಯಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು 26 ಕೋಟಿ ರೈತರು ಮಾಡಿಕೊಂಡಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 4 ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡಲು ಮೋದಿ ಸರ್ಕಾರ ಗಂಭೀರವಾಗಿ ಚಿಂತನೆ ಆರಂಭಿಸಿದೆ ಎಂದು ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಯೊಂದು ಕೇಂದ್ರ ಸರ್ಕಾರದ ಕೆಲವು ಮೂಲಗಳು ನೀಡಿದ ಮಾಹಿತಿಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಈ ಹಿಂದೆ 2008ರಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಮನಮೋಹನ ಸಿಂಗ್‌ ಸರ್ಕಾರ 72 ಸಾವಿರ ಕೋಟಿ ರುಪಾಯಿ ರೈತರ ಸಾಲ ಮನ್ನಾ ಮಾಡಿತ್ತು. ಇದು 2009ರಲ್ಲಿ ಮತ್ತೆ ಯುಪಿಎ ಎರಡನೇ ಅವಧಿಗೆ ಅಧಿಕಾರಕ್ಕೆ ಬರಲು ಸಹಕಾರವಾಗಿತ್ತು. ಈಗ ಮೋದಿ ಸರ್ಕಾರ ಕೂಡ 2019ರಲ್ಲಿ ಪುನಃ ಅಧಿಕಾರಕ್ಕೆ ಬರುವ ತವಕದಲ್ಲಿದ್ದು, ಯುಪಿಎಗಿಂತ 6 ಪಟ್ಟು ಹೆಚ್ಚು ಮೊತ್ತದ ಸಾಲ ಮನ್ನಾ ಮಾಡುವ ಅನಿವಾರ್ಯತೆಗೆ ಸಿಲುಕಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *